Thayi Sharade Loka Poojite

ತಾಯಿ ಶಾರದೆ ಲೋಕ ಪೂಜಿತೆ | Thayi Sharade Loka Poojite

ತಾಯಿ ಶಾರದೆ ಲೋಕ ಪೂಜಿತೆ
ಜ್ಞಾನದಾತೆ ನಮೋಸ್ತುತೆ
ಪ್ರೇಮದಿಂದಲಿ ಸಲಹು ಮಾತೆ
ನೀಡು ಸನ್ಮತಿ ಸೌಖ್ಯದಾತೆ ||ಪ||

ಅಂಧಕಾರವ ಓಡಿಸು
ಜ್ಞಾನಜ್ಯೋತಿಯ ಬೆಳಗಿಸು
ಹೃದಯ ಮಂದಿರದಲ್ಲಿ ನೆಲೆಸು
ಚಿಂತೆಯ ಅಳಿಸು
ಶಾಂತಿಯ ಉಳಿಸು ||ಪ||

ನಿನ್ನ ಮಡಿಲಿನ ಮಕ್ಕಳಮ್ಮ
ನಿನ್ನ ನಂಬಿದ ಕಂದರಮ್ಮ
ನಿನ್ನ ಕರುಣೆಯ ಬೆಳಕಲೆಮ್ಮ
ಬಾಳನು ಬೆಳಗಮ್ಮ
ನಮ್ಮ ಕೋರಿಕೆ ಆಲಿಸಮ್ಮ ||ಪ||

ಒಳ್ಳೆ ಮಾತಗಳಾಡಿಸು
ಒಳ್ಳೆ ಕೆಲಸವ ಮಾಡಿಸು
ಒಳ್ಳೆ ದಾರಿಯಲೆಮ್ಮ ನಡೆಸು
ವಿದ್ಯೆಯ ಕಳಿಸು
ಆಸೆ ಪೂರೈಸು ||ಪ||

Leave a Comment

आपका ईमेल पता प्रकाशित नहीं किया जाएगा. आवश्यक फ़ील्ड चिह्नित हैं *

Scroll to Top